ಅಧಿವೇಶನದಲ್ಲಿ ಏನೇನು?
- ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹ್ತಾಬ್ ನೇಮಕ
- ಹಂಗಾಮಿ ಸ್ಪೀಕರ್ಗೆ ರಾಷ್ಟ್ರಪತಿ ಪ್ರಮಾಣ ಬೋಧನೆ
- ಇಂದು 280 ಸಂಸದರಿಂದ ಪ್ರಮಾಣ ವಚನ ಸ್ವೀಕಾರ
- ನಾಳೆ ಉಳಿದ 264 ಸಂಸದರು ಪ್ರತಿಜ್ಞಾವಿಧಿ ಸ್ವೀಕಾರ
- ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಪ್ರತಿಜ್ಞಾವಿಧಿ
- ಜೂನ್ 26ಕ್ಕೆ ನೂತನ ಸ್ಪೀಕರ್ ಸ್ಥಾನದ ಚುನಾವಣೆ
- ಜೂನ್ 26ರಂದೇ ನೂತನ ಸ್ಪೀಕರ್ ಅಧಿಕಾರ ಸ್ವೀಕಾರ
- ಜೂ.27ಕ್ಕೆ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಇನ್ನು ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಮರ ಮುಂದುವರಿಸಿದೆ. ಹಂಗಾಮಿ ಸ್ಪೀಕರ್ ಆಗಿ ಭತೃಹರಿ ನೇಮಕಕ್ಕೆ ವಿಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಕೇರಳ ಕಾಂಗ್ರೆಸ್ ಸದಸ್ಯ ಕೆ.ಸುರೇಶ್ 8 ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಲೋಕಸಭೆಯ ಹಿರಿಯ ಸದಸ್ಯರಾಗಿರುವ ಕಾರಣ ಸುರೇಶ್ಗೆ ಹಂಗಾಮಿ ಸ್ಪೀಕರ್ ಸ್ಥಾನ ನೀಡಬೇಕಿತ್ತು ಅಂತ ಆಗ್ರಹಿಸಿವೆ. ವಿಪಕ್ಷಗಳ ಆಗ್ರಹಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು ಭತೃಹರಿ ಸತತ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದಾರೆ. ಈಗ ಅವರು ಸತತ 4 ಬಾರಿ ಜಯಗಳಿಸಿದ್ದಾರೆ ಎಂದಿದ್ದರು. ಆದ್ರೆ ಸುರೇಶ್ ಕೇರಳದ ಮಾವೇಲಿಕರ ಲೋಕಸಭಾ ಕ್ಷೇತ್ರದಿಂದ 1989, 1991, 1996, 1999, 2009, 2014, 2019, 2024ರ ಚುನಾವಣೆಯಲ್ಲಿ ಗೆದ್ದಿದ್ದಾರೆಂದು ದಾಖಲೆಗಳು ಹೇಳುತ್ತಿವೆ.
ಇದನ್ನೂ ಓದಿ : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ಜೆಡಿಎಸ್ MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..!