ಬೆಂಗಳೂರು : ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಹತ್ಯೆ ಮಾಡಿ ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವವನ್ನು ಬಿಸಾಕಿ ಹೋಗಿದ್ದು, ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.
ದುಷ್ಕರ್ಮಿಗಳು ಮಂಜುನಾಥ್ ತಲೆಗೆ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದು, ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಮಂಜುನಾಥ್ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..!
Post Views: 178