Download Our App

Follow us

Home » ಜಿಲ್ಲೆ » ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಇ-ಮೇಲ್ : ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು..!

ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಇ-ಮೇಲ್ : ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು..!

ಕಲಬುರಗಿ : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಾಂಬ್ ಬೆದರಿಕೆ ಕರೆ, ಸಂದೇಶಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಏರ್​ಪೋರ್ಟ್ ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ.

ಅನಾಮಧೇಯ ವ್ಯಕ್ತಿಯೊಬ್ಬನಿಂದ ಕಲಬುರಗಿ ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ. ಏರ್​ಪೋರ್ಟ್ ಸ್ಫೋಟಿಸುವುದಾಗಿ ಹೇಳಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಬ್ಯಾಗ್​ಗಳನ್ನು ತಪಾಸಣೆ ನಡೆಸಲಾಗಿದೆ. ಏರ್​ಪೋರ್ಟ್ ಸುತ್ತಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಏರ್‌ಪೋರ್ಟ್‌ನ ಇಂಚಿಂಚು ಸ್ಥಳ ಪರಿಶೀಲನೆ ನಡೆಸ್ತಿದ್ದಾರೆ.

ಇದನ್ನೂ ಓದಿ : ವಿಧಾನಪರಿಷತ್​​ ನೂತನ ಶಾಸಕರಿಗೆ ಇಂದು ಪ್ರಮಾಣವಚನ..!

Leave a Comment

DG Ad

RELATED LATEST NEWS

Top Headlines

ಸುಳ್ಳು ಹೇಳಿದ್ದೇ ನಟ ದರ್ಶನ್​ಗೆ ಮುಳುವಾಯ್ತಾ? ಪೊಲೀಸರ SLPಯ ಪ್ರಮುಖ ಅಂಶಗಳೇನು ಗೊತ್ತಾ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್‌ ಕಳೆದ ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 185

Live Cricket

Add Your Heading Text Here