ಟಿ20 ವಿಶ್ವಕಪ್ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8ರ ಸುತ್ತಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 24 ರನ್‌ಗಳ ಅಮೋಘ ಗೆಲುವು ಸಾಧಿಸಿದ್ದು, ಈ ಮೂಲಕ ಅಜೇಯ ತಂಡವಾಗಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಇಷ್ಟು ಮಾತ್ರವಲ್ಲದೆ, ಏಕದಿನ ವಿಶ್ವಕಪ್ನ ಫೈನಲ್ ಸೋಲಿಗೆ ರೋಹಿತ್ ಪಡೆ ನಿನ್ನೆಯ ಪಂದ್ಯದಲ್ಲಿ ಸರಿಯಾಗಿ ಸೇಡು ತೀರಿಸಿಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಸೆಂಟ್ ಲೂಸಿಯಾದ ಡರೇನ್ ಸಾಮಿ ಕ್ರೀಡಾಂಗಣದಲ್ಲಿ ನಿನ್ನೆ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿ ಸೋಲೊಪ್ಪಿಕೊಂಡಿತು.
ಭಾರತ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್ ಸಹಿತ 92 ರನ್ ಗಳಿಸುವ ಮೂಲಕ ಭಾರತ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು. ರಿಷಬ್ ಪಂತ್ 15 ರನ್, ಸೂರ್ಯ ಕುಮಾರ್ 31 ರನ್, ಶಿವಂ ದುಬೆ 28 ರನ್ ಗಳಿಸಿದರೆ. ಪಾಂಡ್ಯ ಅಜೇಯ 27 ರನ್ ಮತ್ತು ಜಡೇಜಾ ಅಜೇಯ 9 ರನ್ ಗಳಿಸಿದರು.
206 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾಗೆ ಅರ್ಷದೀಪ್ ಸಿಂಗ್ ಮೊದಲ ಓವರ್ ನಲ್ಲೇ ಆಘಾತ ನೀಡಿದರು. ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡಿದರು. 37 ರನ್ ಗಳಿಸಿದ್ದ ಮಾರ್ಷ್ ಕೂಡ ಹೆಚ್ಚು ಸಮಯ ಕ್ರೀಸ್ನಲ್ಲಿ ನಿಲ್ಲಲಿಲ್ಲ. ಬಳಿಕ 76 ರನ್ ಗಳಿಸಿದ್ದ ಹೆಡ್‌ರನ್ನು ಬುಮ್ರಾ ಔಟ್ ಮಾಡುವ ಮೂಲಕ ಭಾರತ ಪಂದ್ಯದ ಮೇಲೆ ಬಿಗಿಹಿಡಿತ ಸಾಧಿಸಿತು. ಹೆಡ್ ಔಟಾಗುತ್ತಿದ್ದಂತೆ ಬಂದ ಆಟಗಾರರು ಗುರಿ ತಲುಪಿಸಲು ವಿಫಲರಾದರು. ಅಂತಿಮವಾಗಿ 20 ಓವರ್ ಗಳಲ್ಲಿ 181 ರನ್ ಮಾತ್ರ ಗಳಿಸಿದ ಆಸ್ಟ್ರೇಲಿಯಾ ಸೋಲೊಪ್ಪಿಕೊಂಡಿತು.
ಇದನ್ನೂ ಓದಿ : “ಕೃಷ್ಣಂ ಪ್ರಣಯ ಸಖಿ” ಚಿತ್ರದ ‘ಚಿನ್ನಮ್ಮ’ ಹಾಡಿಗೆ ಗೋಲ್ಡನ್ ಸ್ಟಾರ್ ಫ್ಯಾನ್ಸ್ ಫಿದಾ..!