ಬೆಂಗಳೂರು : ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿಸಿತ್ತು. ಆದರೆ ಇಂದು ವಿಶೇಷ ಕೋರ್ಟ್ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ MLAಗೆ ಹನಿಟ್ರ್ಯಾಪ್ : ಕೋಟಿ-ಕೋಟಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು CCB ಬಲೆಗೆ..!
Post Views: 56