ಆಳಂದ ಕ್ಷೇತ್ರದಲ್ಲೂ ಮತಗಳ್ಳತನ.. 6000 ಮತದಾರರ ಹೆಸರನ್ನೇ ಡಿಲೀಟ್ ಮಾಡಲಾಗಿದೆ – ರಾಹುಲ್‌ ಗಾಂಧಿ ಗಂಭೀರ ಆರೋಪ!

ನವದೆಹಲಿ : ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಲೋಕಸಭಾ ವಿಪಕ್ಷ ನಾಯಕ, ಸಂಸದ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿಯೂ ಕೂಡ ಮತಗಳ್ಳತನವಾಗಿದ್ದ ಕುರಿತು ರಾಹುಲ್‌ ಗಾಂಧಿಯವರು ದಾಖಲೆ ಬಿಡುಗಡೆ ಮಾಡಿದ್ದರು.

ಇದೀಗ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ ಕ್ಷೇತ್ರದಲ್ಲಿ 2023ರ ಎಲೆಕ್ಷನ್ ವೇಳೆ 6018 ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಬೇರೆ ರಾಜ್ಯಗಳ ಫೋನ್ ನಂಬರ್ ಬಳಕೆ ಮಾಡಲಾಗಿದ್ದು, ಸೂರ್ಯಕಾಂತ್‌ ಹೆಸರು ಬಳಸಿ 14 ನಿಮಿಷದಲ್ಲಿ 12 ವೋಟ್ ಡಿಲೀಟ್ ಮಾಡಲಾಗಿದೆ. ಕಾಂಗ್ರೆಸ್‌ ಬಲವಾಗಿರುವ ಬೂತ್‌ಗಳನ್ನೇ ಟಾರ್ಗೆಟ್‌ ಮಾಡಿ ಮತಗಳ್ಳತನ ಮಾಡಲಾಗಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಮತದಾರರ ಹೆಸರುಗಳನ್ನು ತೆಗೆಸಲು ಬಳಸಿದ ಮೊಬೈಲ್ ಸಂಖ್ಯೆ ಯಾವುದು, ಹಾಗಾದರೆ ಒಟಿಪಿ ಎಲ್ಲಿಗೆ ಬಂದಿದೆ ಇದ್ಯಾವ ಮಾಹಿತಿಯೂ ಸಿಗುತ್ತಿಲ್ಲ. ಒಟ್ಟಿನಲ್ಲಿ ಆಳಂದಲ್ಲಿ 6018ಜನರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಎಲ್ಲಾ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಆದರೆ ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಇನ್ನೂ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ನೇರ ಆರೋಪ ಮಾಡಿದ ರಾಹುಲ್ ಗಾಂಧಿ,18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಬರೆದು ಮಾಹಿತಿ ಕೇಳಲಾಗಿದೆ, ಆದರೆ ಅವರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ, ಸಿಐಡಿ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಫೆಬ್ರವರಿ 23ರಂದು ಎಫ್​ಐಆರ್​ ದಾಖಲಿಸಲಾಗಿತ್ತು. ಹಾಗಾದರೆ ಇದೆಲ್ಲದರ ಹಿಂದೆ ಜ್ಞಾನೇಶ್ ಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಶಿವಣ್ಣ ಅಭಿನಯದ ಬಹುನಿರೀಕ್ಷಿತ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ 2ನೇ ಹಂತದ ಚಿತ್ರೀಕರಣ!

Btv Kannada
Author: Btv Kannada

Read More