ಸುಪ್ರೀಂ ಅಂಗಳಕ್ಕೆ ತಲುಪಿದ ದಸರಾ ಉದ್ಘಾಟನೆ ವಿವಾದ – ನಾಳೆ ತುರ್ತು ಅರ್ಜಿ ವಿಚಾರಣೆ!

ನವದೆಹಲಿ : ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್‌ ಗೌರವ್‌ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ 22ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಶುಕ್ರವಾರ (ನಾಳೆ) ನಡೆಸುವುದಾಗಿ ಹೇಳಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಮೂರು ಅರ್ಜಿಗಳು ವಜಾ : ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆ.15ರಂದು ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಹಿಂದೂಯೇತರ ವ್ಯಕ್ತಿ ಭಾಗವಹಿಸುವುದರಿಂದ ಯಾವುದೇ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿಲ್ಲ ಎಂದು ಅಭಿಪ್ರಾಯಪಟ್ಟು ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

ಇದನ್ನೂ ಓದಿ : ಆಳಂದ ಕ್ಷೇತ್ರದಲ್ಲೂ ಮತಗಳ್ಳತನ.. 6000 ಮತದಾರರ ಹೆಸರನ್ನೇ ಡಿಲೀಟ್ ಮಾಡಲಾಗಿದೆ – ರಾಹುಲ್‌ ಗಾಂಧಿ ಗಂಭೀರ ಆರೋಪ!

 

Btv Kannada
Author: Btv Kannada

Read More