ಕುಡಿದ ಮತ್ತಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ – ಪುಡಿರೌಡಿ ಅರೆಸ್ಟ್!

ನೆಲಮಂಗಲ : ಕುಡಿದ ಮತ್ತಿನಲ್ಲಿ ಪುಡಿರೌಡಿಯೋರ್ವ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ನೆಲಮಂಗಲದ ಡಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೇತನ್ ಅಲಿಯಾಸ್ ಬಿಕ್ಲ ಚೇತು ಎಂಬಾತ ಅಗಡಿ ಎಂಬಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಹೆದರಿದ ಮಹಿಳೆಯರು 112 ಸಹಾಯವಾಣಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ಪೇದೆ ಪೀರ್ ಸಾಬ್ ಅವರ ಮೇಲೆ ಚೇತನ್ ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಟಿಪ್ಪರ್ – ಕಾರಿನ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 7 ಮಂದಿ ದುರ್ಮರಣ!

Btv Kannada
Author: Btv Kannada

Read More