Download Our App

Follow us

Home » ಸಿನಿಮಾ » ‘ಮೆಜೆಸ್ಟಿಕ್’ನಲ್ಲಿ ಕಿಡ್ನಾಪ್ ಆದ ಶೃತಿ – ರಾಮೋಹಳ್ಳಿಯಲ್ಲಿ ನಡೆಯಿತು ಕ್ಲೈಮ್ಯಾಕ್ಸ್​​ನ ಚಿತ್ರೀಕರಣ..!

‘ಮೆಜೆಸ್ಟಿಕ್’ನಲ್ಲಿ ಕಿಡ್ನಾಪ್ ಆದ ಶೃತಿ – ರಾಮೋಹಳ್ಳಿಯಲ್ಲಿ ನಡೆಯಿತು ಕ್ಲೈಮ್ಯಾಕ್ಸ್​​ನ ಚಿತ್ರೀಕರಣ..!

ಬೆಂಗಳೂರಿನ  ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ ಏರಿಯಾದಲ್ಲಿ ಏನೇನೆಲ್ಲ ಅಕ್ರಮ ಚಟುವಟಿಕೆಗಳು ನಡೆಯುತ್ತವೆ, ಅಲ್ಲಿನ ರೌಡಿಸಂ ಹೇಗಿರುತ್ತದೆ ಎಂಬುದನ್ನು “ಮೆಜೆಸ್ಟಿಕ್ 2” ಚಿತ್ರದ ಮೂಲಕ ನಿರ್ದೇಶಕ ರಾಮು ಅವರು ಹೇಳಹೊರಟಿದ್ದಾರೆ.

ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ನಾಯಕನಾಗಿ ನಟಿಸಿದ್ದಾರೆ. ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ ಚಿತ್ರದುರ್ಗದ ಟಿ.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ರಾಮೋಹಳ್ಳಿಯಲ್ಲಿ ನಡೆಯಿತು.

ಪೆಟ್ರೋಲ್ ಪ್ರಸನ್ನ ಅವರ ತಾಯಿಯಾದ ಶೃತಿ ಅವರನ್ನು ವಿಲನ್​​​​ಗಳು ಕಿಡ್ನಾಪ್ ಮಾಡಿರುತ್ತಾರೆ. ನಾಯಕ ಭರತ್ ಹಾಗೂ ಪೆಟ್ರೋಲ್ ಪ್ರಸನ್ನ ಇಬ್ಬರೂ ಶೃತಿ ಅವರನ್ನು ಹುಡುಕಿಕೊಂಡು ಬರುವ ದೃಶ್ಯವನ್ನು ಅಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ಇದು ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಕೂಡ ಆಗಿದೆ.

ರೌಡಿಸಂ ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ “ಮೆಜೆಸ್ಟಿಕ್ 2” ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಅವರು ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ : ಮಧ್ಯರಾತ್ರಿ 2 ಗಂಟೆ ಆದ್ರೂ ಬಾಗಿಲು ಬಡಿಯುತ್ತಿದ್ದರು – ಕಾಸ್ಟಿಂಗ್ ಕೌಚ್‌ ಬಗ್ಗೆ ಕರಾಳ ಸತ್ಯ ಬಿಚ್ಚಿಟ್ಟ ಹಿರಿಯ ನಟಿ ಅನ್ನಪೂರ್ಣಮ್ಮ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here