ಅಬುಧಾಬಿ : 2025ರ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಭಾರತ 21 ರನ್‌ಗಳ ಗೆಲುವು ಸಾಧಿಸಿದ್ದು, ಇತ್ತ ಒಮಾನ್ ಕೂಡ ಪಂದ್ಯದಲ್ಲಿ ತೀವ್ರ ಹೋರಾಡಿ ಸೋತಿದೆ.

ಅಬುಧಾಬಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ಒಮನ್ ನಿಗದಿತ ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 167 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿದೆ.
ಈ ಮೂಲಕ ಗ್ರೂಪ್ ಹಂತದಲ್ಲಿ ಸತತ ಮೂರು ಪಂದ್ಯ ಗೆದ್ದು ಅಜೇಯವಾಗಿಯೇ ಸೂಪರ್-4 ಹಂತಕ್ಕೆ ಭಾರತ ಲಗ್ಗೆಯಿಟ್ಟಿದೆ. ಭಾರತದ ಪರ ಹಾರ್ದಿಕ್ ಪಾಂಡ್ಯ, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್‌ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು. ಇನ್ನು ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಒಮಾನ್ ತಂಡವು ಕೆಚ್ಚೆದೆಯ ಪ್ರದರ್ಶನ ತೋರುವ ಮೂಲಕ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ : ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ : KAS ಅಧಿಕಾರಿ ಸುಧಾ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!







