ರಣರೋಚಕ ಟಿ20 ವಿಶ್ವಕಪ್ನ ಫೈನಲ್ ಪಂದ್ಯವನ್ನ ಟೀಮ್ ಇಂಡಿಯಾ ಗೆದ್ದು ಬೀಗಿದ್ದು, ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬರೋಬ್ಬರಿ 11 ವರ್ಷಗಳ ನಂತರ ಭಾರತ ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.
2013ರಲ್ಲಿ ಕೊನೆಯ ಬಾರಿಗೆ ಐಸಿಸಿ ಆಯೋಜಿಸಿದ ಟ್ರೋಫಿಯನ್ನು ಭಾರತ ಗೆದ್ದುಕೊಂಡಿತ್ತು. ನಂತರ ಭಾರತ ಕಳೆದ 10 ವರ್ಷಗಳಿಂದ ಪ್ರಶಸ್ತಿಯ ಸನಿಹ ಬಂದು ಕೊನೆಯಲ್ಲಿ ಎಡವುತಿತ್ತು. 2013 ರಲ್ಲಿ ಎಂಎಸ್ ಧೋನಿ ನಾಯಕತ್ವದ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 5 ರನ್‌ಗಳಿಂದ ಮಣಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಟ್ರೋಫಿಯ ಬಳಿಕ ಇಲ್ಲಿಯವರೆಗೆ ಐಸಿಸಿ ಆಯೋಜಿಸಿದ ಒಂದೇ ಒಂದು ಟ್ರೋಫಿಯನ್ನು ಗೆದ್ದುಕೊಂಡಿಲ್ಲ.
ಕಳೆದ 12 ತಿಂಗಳಿನಲ್ಲಿ ಭಾರತ ಮೂರು ಬಾರಿ ಫೈನಲ್ ಪ್ರವೇಶಿಸಿತ್ತು. ಕಳೆದ ವರ್ಷದ ಜೂನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲಿನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ನಂತರ ಭಾರತದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದರೆ ಮೂರನೇ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತ ಈ ಬಾರಿ ಟಿ20 ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಇದನ್ನೂ ಓದಿ : ಹೊಸದಾಗಿ ರೈಲ್ವೆ ಅಂಡರ್ಪಾಸ್ಗಳನ್ನು ಮಾಡಲು ಚಿಂತನೆ ಮಾಡಿದ್ದೇವೆ – ಸಚಿವ ವಿ. ಸೋಮಣ್ಣ..!