ಮೈಸೂರು : ಚಾಲಕನ ಹುಚ್ಚಾಟದಿಂದಾಗಿ ಸಾರಿಗೆ ಬಸ್ ಕಂದಕಕ್ಕೆ ಉರುಳಿದೆ. ಮೈಸೂರಿನ ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಬಳಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಎಲ್ಲಾ ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ವರುಣಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಆ.15ಕ್ಕೆ ಸಮರ್ಜಿತ್ ಲಂಕೇಶ್ ಅಭಿನಯದ ‘ಗೌರಿ’ ಸಿನಿಮಾ ರಿಲೀಸ್..!
Post Views: 459