Download Our App

Follow us

Home » ಮೆಟ್ರೋ » ನೂರಾರು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಹಿರಿಯ ಪೊಲೀಸ್ ಅಧಿಕಾರಿ..!

ನೂರಾರು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಹಿರಿಯ ಪೊಲೀಸ್ ಅಧಿಕಾರಿ..!

ಬೆಂಗಳೂರು : ಹಿರಿಯ ಪೊಲೀಸ್ ಸಿಬ್ಬಂದಿ ಲೊಕೇಶಪ್ಪ ಅವರು ನೂರಾರು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾಗಿದ್ದಾರೆ. ಬೆಂಕಿ ದುರಂತದಲ್ಲಿ ಮಗಳನ್ನು ಕಳೆದುಕೊಂಡ ASI ಬಡಮಕ್ಕಳಿಗೆ ಶಾಲಾ ಸಾಮಾಗ್ರಿಗಳನ್ನು ನೀಡಿ ಸಹಾಯ ಮಾಡಿದ್ದಾರೆ.

ಆರಂಭದಲ್ಲಿ ASI ಒಂದು ಶಾಲೆಯಿಂದ ಶುರುಮಾಡಿದ್ದರು. ಇದೀಗ ಸುಮಾರು 600 ಬಡ ಮಕ್ಕಳಿಗೆ ಶಾಲಾ ಸಾಮಾಗ್ರಿಗಳ ಒದಗಿಸುತ್ತಿದ್ದಾರೆ. ತನ್ನ ಎರಡು ತಿಂಗಳ ಸಂಬಳವನ್ನು ಬಡಮಕ್ಕಳ ವಿದ್ಯಾಭ್ಯಾಸದ ಅಗತ್ಯಕ್ಕೆ ಮುಡಿಪಾಗಿಟ್ಟಿದ್ದಾರೆ. ಶಿವಾಜಿನಗರ ಮಹಿಳಾ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಲೊಕೇಶಪ್ಪ ಅವರು ಬಡ ವಿದ್ಯಾರ್ಥಿಗಳಿಗೆ ದಾರಿ ದೀಪ‌ವಾಗಿದ್ದಾರೆ. 2019 ರಲ್ಲಿ ಬೆಂಕಿ ಅವಘಡದಲ್ಲಿ ಲೊಕೇಶಪ್ಪ ಅವರು ತನ್ನ ಮಗಳು ಹರ್ಷಾಲಿಯನ್ನು ಕಳೆದುಕೊಂಡಿದ್ದರು.

ಮಗಳ ಸಾವಿನ ಬಳಿಕ ಹಿರಿಯ ಸಿಬ್ಬಂದಿ ಬಡಮಕ್ಕಳಿಗೆ ಶಾಲಾ ಸಾಮಾಗ್ರಿಗಳನ್ನು ನೀಡಲು ನಿರ್ಧಾರ ಮಾಡಿದ್ದಾರೆ. ತನ್ನ ಮಗಳ ನೆನಪಿನಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ASI ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ತನ್ನ ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣ ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ವರ್ಷದಿಂದ ಆರು ಶಾಲೆಗಳ ಬಡ ಮಕ್ಕಳಿಗೆ ಶಾಲಾ ಸಾಮಗ್ರಿಗಳಿಗೆ ಧನಸಹಾಯ ನೀಡುತ್ತಿದ್ದಾರೆ.

 

ಬೆಂಗಳೂರಿನ 1 ಶಾಲೆ, ಮೈಸೂರಿನ 1 ಹಾಗೂ ಹಾಸನದ 4 ಶಾಲೆಯ ಬಡಮಕ್ಕಳಿಗೆ ನೆರವಾಗಿದ್ದಾರೆ. 1 ರಿಂದ 8ನೇ ತರಗತಿಯ 600 ಮಕ್ಕಳಿಗೆ ಸಾಮಾಗ್ರಿಗಳ ನೀಡಿ ಸಹಾಯ ಮಾಡಿದ್ದಾರೆ. ಬೆಂಗಳೂರಿನ 200 ಮಕ್ಕಳು ಸೇರಿದಂತೆ 600 ಮಕ್ಕಳಿಗೆ ನೆರವಾಗಿದ್ದಾರೆ. ಲೊಕೇಶಪ್ಪ ಅವರ ಪತ್ನಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಂತರ ತನ್ನ ಮಗಳ ಹೆಸರಿನಲ್ಲಿ NGO ಸ್ಥಾಪನೆ ಮಾಡಿದ್ದಾರೆ. ಸದ್ಯ ASI ಅವರ ಕೆಲಸಕ್ಕೆ ಹಲವೆಡೆ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ : ಹಾಸನ SP ಕಚೇರಿ ಆವರಣದಲ್ಲೇ ಪತ್ನಿಗೆ ಚೂರಿ ಇರಿದ ಕಾನ್​ಸ್ಟೇಬಲ್​​​ : ಚಿಕಿತ್ಸೆ ಫಲಿಸದೇ ಪತ್ನಿ ಮಮತಾ ಸಾವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here