ಪ್ರಜ್ವಲ್ ರೇವಣ್ಣಗೆ ಭಾರೀ ನಿರಾಸೆ.. ಪ್ರಕರಣ ವರ್ಗಾವಣೆ ಕೋರಿ ಸಲ್ಲಿಸಿದ್ದ ಎರಡೂ ಅರ್ಜಿಗಳು ವಜಾ!

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದಾಕೆ ಹಾಗೂ ಜಿ.ಪಂ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಆರೋಪದ ಪ್ರಕರಣ ವಿಚಾರಣೆಯನ್ನು ನ್ಯಾ. ಸಂತೋಷ್ ಗಜಾನನ ಭಟ್ ಅವರ ಪೀಠದಿಂದ ಬೇರೆ ಪೀಠಕ್ಕೆ ವರ್ಗಾವಣೆ ಕೋರಿದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದ ಅಫರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಬೇರೆ ಕೋರ್ಟ್‌ ಗೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದರು.

ಸಿಸಿಹೆಚ್-1 ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣಗೆ ಇದೀಗ ನಿರಾಸೆಯಾಗಿದೆ. ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ MI ಅರುಣ್ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ‘ಬಿಗ್ ಬಾಸ್’ ಕನ್ನಡ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಗ್ರ್ಯಾಂಡ್ ಓಪನಿಂಗ್!

Btv Kannada
Author: Btv Kannada

Read More