ಬೆಂಗಳೂರು : ಹಳೆಯ ಕೇಸ್ ಸಂಬಂಧ ಅರೆಸ್ಟ್ ಆಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ತೀವ್ರ ಸ್ವರೂಪಗೊಂಡು, ಹಲವು ಹೋಟೆಲ್, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಎರಡು ದಿನಗಳ ಹಿಂದಷ್ಟೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದರು.
ನಂತರ 2017 ರ ಆಸ್ತಿಪಾಸ್ತಿ ಹಾನಿ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದರು. ನಿನ್ನೆ ನಾರಾಯಣ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 30 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಅರ್ಜಿ ಆದೇಶವನ್ನು ಇಂದಿಗೆ ಕಾಯ್ದಿರಿಸಿ ಆದೇಶ ಹೊರಡಿಸಿತ್ತು. ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ : 2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದರು.
ನಾರಾಯಣಗೌಡರು ಇಂದೂ ರಿಲೀಸ್ ಆಗಲ್ವಾ..?
ಬೇಲ್ ಸಿಕ್ಕರೂ ನಾರಾಯಣಗೌಡರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮತ್ತೊಂದು ಕೇಸ್ನಲ್ಲಿ ಕಸ್ಟಡಿಗೆ ಪಡೆಯಲು ಪೊಲೀಸರು ರೆಡಿಯಾಗಿದ್ದಾರೆ. ಹಲಸೂರು ಗೇಟ್ ಪೊಲೀಸರು ಮತ್ತೆ ಕಸ್ಟಡಿಗೆ ಪಡೆಯುಲು ಸಿದ್ಧತೆ ನಡೆಸಿದ್ದು, NDMA – ರಾಷ್ಟ್ರೀಯ ನಿರ್ವಹಣ ವಿಪತ್ತು ಕಾಯ್ದೆ ಅಡಿ ಕೇಸ್ ದಾಖಲಾಗಿದೆ. 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ.
ಇದನ್ನೂ ಓದಿ : ಖಾಸಗಿ ಬ್ಯಾಂಕ್ನಿಂದ ಕಿರುಕುಳ ಆರೋಪ : ವಿಧಾನಸೌಧ ಮುಂಭಾಗ ಆತ್ಮಹ*ತ್ಯೆಗೆ ಯತ್ನಿಸಿದ ದಂಪತಿ..!