ಭಾರತದ ಎದುರು ಮಂಡಿಯೂರಿದ ಬಾಂಗ್ಲಾ.. ಸೂರ್ಯ ಪಡೆ ಫೈನಲ್​​​ಗೆ ಎಂಟ್ರಿ!

ದುಬೈ : ಏಷ್ಯಾಕಪ್‌ ಸೂಪರ್‌-4 ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 41 ರನ್‌ಗಳ ಜಯ ಸಾಧಿಸಿದ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ. ಭಾರತದ ಈ ಗೆಲುವಿನ ಮೂಲಕ ಶ್ರೀಲಂಕಾ ತಂಡ ಫೈನಲ್‌ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ.

ಬುಧವಾರ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 168 ರನ್‌ಗಳ ಗುರಿಯನ್ನು ಪಡೆದ ಬಾಂಗ್ಲಾ 19.3 ಓವರ್‌ಗಳಲ್ಲಿ 127 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಇಂದು ಪಾಕಿಸ್ತಾನ ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಜಯಗಳಿಸಿದವರು ಫೈನಲ್‌ ಪ್ರವೇಶಿಸಲಿದ್ದಾರೆ.

ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ : ಏಷ್ಯಾಕಪ್‌ನಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆದಿದ್ದು, 12ನೇ ಬಾರಿಗೆ ಫೈನಲ್ ತಲುಪಿದೆ. ಭಾರತ ತಂಡ ಎಂಟು ಬಾರಿ ಟೂರ್ನಿಯನ್ನು ಗೆದ್ದಿದೆ. ಭಾರತ ತಂಡ 1984, 1988, 1990-91, 1995, 2010, 2016, 2018 ಮತ್ತು 2023 ರಲ್ಲಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇದನ್ನೂ ಓದಿ : ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ.. ಇಲ್ಲಿದೆ ಸಂಪೂರ್ಣ ಪಟ್ಟಿ!

Btv Kannada
Author: Btv Kannada

Read More