ಬೆಂಗಳೂರು : ಬಿಜಾಪುರದ ಜಯಮೃತ್ಯುಂಜಯ ಸ್ವಾಮೀಜಿಗೆ ಬೆಂಗಳೂರಿನ ಯುವತಿಯೊಬ್ಬಳು ನಕಲಿ ಸಿಡಿ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈ ಸಂಬಂಧ ಬಸವ ಮೃತ್ಯುಂಜಯ ಸ್ವಾಮೀಜಿ ಬಿಜಾಪುರದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

3 ಕೋಟಿ ರೂ. ಕೊಡುವಂತೆ ಯುವತಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಹಿಳೆ ಹಾಗೂ ಇತರ ನಾಲ್ವರ ಬಂಧನಕ್ಕೆ ಬಿಜಾಪುರದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

ಗ್ಯಾಂಗ್ವೊಂದು ನಕಲಿ ಸಿಡಿ ಇಟ್ಟುಕೊಂಡು ಜಯಮೃತ್ಯುಂಜಯ ಸ್ವಾಮೀಜಿಯನ್ನು ಬ್ಲಾಕ್ ಮೇಲ್ ಮಾಡುತ್ತಿತ್ತು. ಕಳೆದ ಎರಡು ತಿಂಗಳಿಂದ ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಹಲವರು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಬ್ಲ್ಯಾಕ್ಮೇಲ್ ಮಾಡಿರುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ : ಕೊಡಗಿನಲ್ಲಿ ರಶ್ಮಿಕಾ – ವಿಜಯ್ ಡಿನ್ನರ್ ಪಾರ್ಟಿ – ಅಳಿಯನಿಗೆ ಕೊಡವ ಶೈಲಿಯ ಭರ್ಜರಿ ಆತಿಥ್ಯ!
Author: Btv Kannada
Post Views: 280









