Download Our App

Follow us

Home » ರಾಜಕೀಯ » ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲ್ಲ : ಕಾಂಗ್ರೆಸ್​ನ ಅಧಿಕೃತ ಘೋಷಣೆ​..!

ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲ್ಲ : ಕಾಂಗ್ರೆಸ್​ನ ಅಧಿಕೃತ ಘೋಷಣೆ​..!

ನವದೆಹಲಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.

ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ : ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ನಟ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ..!

 

Leave a Comment

DG Ad

RELATED LATEST NEWS

Top Headlines

ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆಯುತ್ತಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ

Live Cricket

Add Your Heading Text Here