ಬ್ರಾಹ್ಮಣ ಸಂಪ್ರದಾಯದಂತೆ ಇಂದು ಸಾಹಿತಿ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಸರಸ್ವತಿ ಪುತ್ರ ಡಾ ಎಸ್ ಎಲ್ ಭೈರಪ್ಪ ನವರ ಅಂತ್ಯಸಂಸ್ಕಾರ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಅಂತಿಮ ದರ್ಶನ ಬಳಿಕ ಮೈಸೂರಿಗೆ ಪಾರ್ಥಿವ ಶರೀರ ತಂದು ಮೈಸೂರಿನ ಕಲಾಮಂದಿರಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಂತರ ಮೃತದೇಹವನ್ನ ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶವಗಾರದಲ್ಲಿ ಇರಿಸಲಾಯಿತು. ಇಂದು ಬೆಳಗ್ಗೆ 8 ಗಂಟೆಗೆ ಆಸ್ಪತ್ರೆಯಿಂದ ನೇರವಾಗಿ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದ್ದು, ಮನೆಯ ಬಳಿಯೂ ಕೆಲಹೊತ್ತು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಮ್ಮ ಬರವಣಿಗೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದ 94 ವರ್ಷದ ಸಾಹಿತಿ ಭೈರಪ್ಪ ಮೊನ್ನೆ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದರು. ಇವರ ಸಾವಿಗೆ ಇಡೀ ಕರುನಾಡೇ ಮರುಕ ಪಟ್ಟಿತು, ಇಂದು ಇವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ, ಈಗಾಗಲೇ ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಂಡಿದೆ. ಬ್ರಾಹ್ಮಣ ಸಂಪ್ರದಾಯದಂತೆ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ.

ಪದ್ಮಭೂಷಣ ಎಸ್‌ಎಲ್ ಭೈರಪ್ಪನವರ ಸಾವಿಗೆ ಇಡೀ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದ್ದು, ಇವರ ಅಂತಿಮ ದರ್ಶನಕ್ಕೆ ಇವರ ಓದುಗ ಬಳಗ ಮತ್ತು ಅಭಿಮಾನಿಗಳು ಸಾಗರದಂತೆ ಹರಿದು ಬಂದಿತು. ಕುಟುಂಬಸ್ಥರಿಂದ ಅಂತಿಮ ಪೂಜೆ ವಿಧಿವಿಧಾನ ನಡೆಯಲಿದ್ದು, ನಂತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ, ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ : ಜಯರಾಮ್ ದೇವಸಮುದ್ರ ನಿರ್ಮಾಣದ ಹೊಸ ಚಿತ್ರಕ್ಕೆ ಶ್ರೀಮುರಳಿ ನಾಯಕ – ನವೆಂಬರ್​ನಿಂದ ಶೂಟಿಂಗ್ ಶುರು!

Btv Kannada
Author: Btv Kannada

Read More