ವಿಜಯನಗರ : ಅಡುಗೆ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ 8 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗಿನ ಜಾವ ಘಟನೆ ನಡೆದಿದ್ದು, ಸ್ಪೋಟದ ರಭಸಕ್ಕೆ ಮನೆ ಗೋಡೆ ಕುಸಿದಿದೆ. ವಕೀಲ ಹಾಲಪ್ಪ, ಸಹೋದರ ಮೈಲಾರಪ್ಪ ಸೇರಿದಂತೆ ಒಂದೇ ಕುಟುಂಬದ 8 ಜನರು ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?
Author: Btv Kannada
Post Views: 225







