ಹುಬ್ಬಳ್ಳಿ ಮೂಲದ ವಿ.ಸಿ. ಸಜ್ಜನರ ಹೈದರಾಬಾದ್ ಪೊಲೀಸ್ ಕಮಿಷನರ್ ಆಗಿ ನೇಮಕ!

ಹೈದರಾಬಾದ್‌ : ಹುಬ್ಬಳ್ಳಿ ಮೂಲದ ತೆಲಂಗಾಣದ ಹಿರಿಯ IPS ಅಧಿಕಾರಿ ವಿ.ಸಿ. ಸಜ್ಜನರ ಅವರು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿ ನೇಮಕರಾಗಿದ್ದಾರೆ.

ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ.ಸಿ. ಸಜ್ಜನರ ಅವರು ಇನ್ಮುಂದೆ ಮುಂದಿನ ಆದೇಶದವರೆಗೆ ಹೈದರಾಬಾದ್ ಅಂತಹ ದೊಡ್ಡ ನಗರದ ಪೊಲೀಸ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. IPS ವಿ.ಸಿ. ಸಜ್ಜನರ ಅವರು ತೆಲಂಗಾಣದಲ್ಲಿ ‘ಸೂಪರ್ ಕಾಪ್’ ಎಂದು ಹೆಸರು ಮಾಡಿದ್ದಾರೆ.

ಇನ್ನು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿದ್ದ ಸಿ.ವಿ. ಆನಂದ್ ಅವರನ್ನು ಗೃಹ ಇಲಾಖೆ ವಿಶೇಷ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಒಟ್ಟು 27 IPS ಅಧಿಕಾರಿಗಳ ವರ್ಗಾವಣೆ ಮಾಡಿ ಸಿಎಂ ರೇವಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

2019 ನವೆಂಬರ್ 29 ರಂದು ಹೈದರಾಬಾದ್ ಹೊರವಲಯದಲ್ಲಿ ಪ್ರಿಯಾಂಕಾ ರೆಡ್ಡಿ ಎನ್ನುವ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದು ಆಕೆಯ ದೇಹ ಸುಟ್ಟು ಹಾಕಿದ್ದರು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ನಾಲ್ವರೂ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಆಗ ಸೈಬರಾಬಾದ್ ಪೊಲೀಸ್ ಕಮಿಷನ‌ರ್ ಆಗಿ ವಿಶ್ವನಾಥ್ ಸಜ್ಜನರ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನೂ ಓದಿ : ಬಾಗಲಕೋಟೆಯಲ್ಲಿ ಧಾರಾಕಾರ ಮಳೆಗೆ ಗೋಡೆ ಕುಸಿದು ಬಾಲಕ ಸಾವು – ಮತ್ತೋರ್ವನಿಗೆ ಗಂಭೀರ ಗಾಯ!

Btv Kannada
Author: Btv Kannada

Read More