Download Our App

Follow us

Home » ಸಿನಿಮಾ » ಬಹುನಿರೀಕ್ಷಿತ ‘ಪೌಡರ್‌’ ಚಿತ್ರದ ಫಸ್ಟ್ ಸಾಂಗ್ ರಿಲೀಸ್..!

ಬಹುನಿರೀಕ್ಷಿತ ‘ಪೌಡರ್‌’ ಚಿತ್ರದ ಫಸ್ಟ್ ಸಾಂಗ್ ರಿಲೀಸ್..!

ಬಹುನಿರೀಕ್ಷಿತ ಹಾಸ್ಯ ಚಟಾಕಿ ಪೌಡರ್ ಚಿತ್ರ ಇದೀಗ “ಮಿಷನ್‌ ಘಮ ಘಮ” ಎಂಬ ತನ್ನ ಮೊದಲ ಗೀತೆಯನ್ನು ಇಂದು ಬಿಡುಗಡೆ ಮಾಡಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಹೆಸರಾಂತ ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್‌ ಮತ್ತು ಖ್ಯಾತ ಗಾಯಕ ಎಂ.ಸಿ.ಬಿಜ್ಜು ಅವರ ಕಾಂಬಿನೇಷನ್‌ ಅಲ್ಲಿ ಮೂಡಿ ಬಂದಿರುವ ಮೊದಲ ಗೀತೆ ಇದಾಗಿದ್ದು, ತನ್ನ ವಿಭಿನ್ನವಾದ ಟ್ಯೂನ್‌ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಮಾಧುರ್ಯ ಪ್ರಧಾನ ಗೀತೆಗಳಿಗೆ ಹೆಸರುವಾಸಿಯಾದ ವಾಸುಕಿ ವೈಭವ್‌ ಮತ್ತು Rap ಸಂಗೀತದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಎಂ.ಸಿ.ಬಿಜ್ಜು ಒಟ್ಟಾಗಿ ಬಂದಿರುವುದು ಹಾಡಿಗೆ ಹೆಚ್ಚು ಮೆರಗನ್ನು ತಂದಿದೆ.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಗುವುದೇ? “ಪೌಡರ್”‌ಹಿಂದಿನ “ಪವರ್”‌ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಉತ್ತರ ದೊರೆಯಲಿದೆ.

ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ ಮುಖ್ಯ ಭೂಮಿಕೆಯಲ್ಲಿರುವ‌ “ಪೌಡರ್” ಚಿತ್ರಕ್ಕೆ ಜನಾರ್ದನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ. ಕೆ‌.ಆರ್.ಜಿ. ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ನ ಚೊಚ್ಚಲ ಸಹಯೋಗವಾದ “ಪೌಡರ್” ಚಿತ್ರವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಹ್ಮಣ್ಯಂ ಕೆ‌.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ‌.

ಇದನ್ನೂ ಓದಿ : ಸದ್ದಿಲ್ಲದೇ ಮದುವೆಯಾದ್ರಾ ವಿನಯ್​​ ರಾಜ್​ಕುಮಾರ್? ಈ ಬಗ್ಗೆ ನಟಿ ಸ್ವಾತಿಷ್ಟಾ ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಕೆನಡಾ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ..!

ಒಟ್ಟಾವೊ : ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ

Live Cricket

Add Your Heading Text Here