Download Our App

Follow us

Home » ಸಿನಿಮಾ » ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್ – ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್..!

ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್ – ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್..!

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗೂ ಅಜಯ್ ಪೃಥ್ವಿ, ರಚನಾ ಇಂದರ್ ನಾಯಕ, ನಾಯಕಿಯಾಗಿ ನಟಿಸಿರುವ “ನಾಟ್ ಔಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.

ಈ ಚಿತ್ರದ  ಟ್ರೇಲರ್​​ರನ್ನು ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್​​​​ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಹಾರೈಸಿದರು.

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲಬಾರಿಗೆ ಒಂದು ಹೊಸ ಯೋಜನೆಗೆ “ನಾಟ್ ಔಟ್” ಚಿತ್ರತಂಡ ಕೈ ಹಾಕಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ದೃಢೀಪಡಿಸುವ ಉದ್ದೇಶದಿಂದ  ಫಸ್ಟ್ ಆಫ್ ಸಿನಿಮಾ ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ. ಸೆಕೆಂಡ್ ಹಾಫ್ ಸಿನಿಮಾ ನೋಡುವ ಕುತೂಹಲ ಇದ್ದರೆ ಮಧ್ಯಂತರದಲ್ಲಿ ಟಿಕೆಟ್ ಖರೀದಿ ಮಾಡಬೇಕಾಗುತ್ತದೆ.

“ನಾಟ್ ಔಟ್” ಲಾಕ್​​​​ಡೌನ್​​​ನಲ್ಲಿ ನಾನು ಬರೆದ ಕಥೆ‌ ಎಂದ ನಿರ್ದೇಶಕ ಅಂಬರೀಶ್ ಅವರು, ನನ್ನ ಕಥೆಯನ್ನು ಮೆಚ್ಚಿ ರಾಷ್ಟ್ರಕೂಟ ಪಿಕ್ಚರ್ಸ್ ಅವರು ನಿರ್ಮಾಣಕ್ಕೆ ಮುಂದಾದರು. ಟೊರೊಂಟೊದಲ್ಲಿ ಅಭಿನಯ ಕಲಿತು ಬಂದಿರುವ ಅಜಯ್ ಪೃಥ್ವಿ, ರಚನಾ ಇಂದರ್, ರವಿಶಂಕರ್, ಕಾಕ್ರೋಜ್ ಸುಧೀ ಮುಖ್ಯಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಚಿತ್ರವಾಗಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದಿದ್ದಾರೆ.

ನನ್ನದು ಈ ಚಿತ್ರದಲ್ಲಿ ಆಂಬುಲೆನ್ಸ್ ಚಾಲಕನ ಪಾತ್ರ. ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಈ ಚಿತ್ರದ ನನ್ನ ಪಾತ್ರವನ್ನು ಎಲ್ಲಾ ಆಂಬುಲೆನ್ಸ್ ಚಾಲಕರಿಗೆ ಅರ್ಪಿಸುತ್ತಿದ್ದೇನೆ ಎಂದು ನಾಯಕ ಅಜಯ್ ಪೃಥ್ವಿ ತಿಳಿಸಿದ್ದಾರೆ.

ಇನ್ನು ರಚನಾ ಇಂದರ್, ಕಾಕ್ರೋಜ್ ಸುಧೀ, ಅಶ್ವಿನ್ ಹಾಸನ್, ಪ್ರಶಾಂತ್ ಸಿದ್ದಿ, ಸಲ್ಮಾನ್ ಮುಂತಾದ ಕಲಾವಿದರು ಹಾಗೂ ಕಾರ್ಯಕಾರಿ ನಿರ್ಮಾಪಕ ಕುಮಾರ್ ನಾಟ್ ಔಟ್ ಚಿತ್ರದ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಕ್ಯೂಆರ್ ಕೋಡ್​​​ನಲ್ಲಿ ಉತ್ತಮ ರೇಟಿಂಗ್ – ಭೈಯಪ್ಪನಹಳ್ಳಿ ಪೊಲೀಸ್ ಇನ್ಸ್​​​​ಪೆಕ್ಟರ್​​ಗೆ ಗೌರವ ಪ್ರಶಂಸೆ ನೀಡಿದ ಪೊಲೀಸ್ ಕಮೀಷನರ್..!

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here