ಚಿತ್ರದುರ್ಗ : ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ನಿವಾಸಿ 13 ವರ್ಷದ ಪ್ರೇಮ ಸಾಗರ ನೇಣಿಗೆ ಶರಣಾದ ಬಾಲಕ.
ಮೃತ ವಿದ್ಯಾರ್ಥಿಯು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಆ.15ಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ತೆರೆಗೆ..!
Post Views: 203