Download Our App

Follow us

Home » ರಾಜಕೀಯ » ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು – ಡಿಸಿಎಂ ಡಿಕೆಶಿ ಮಹತ್ವದ ಘೋಷಣೆ..!

ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು – ಡಿಸಿಎಂ ಡಿಕೆಶಿ ಮಹತ್ವದ ಘೋಷಣೆ..!

ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಜಿಲ್ಲೆಯ ಅಭಿವೃದ್ದಿಗೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆಯನ್ನು ಇಡಲು ಚಿಂತನೆ ನಡೆಸಿರುವ ಡಿಕೆ ಶಿವಕುಮಾರ್​​ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರ್ಪಡೆ ವಿಚಾರವಾಗಿ ಸಿಎಂಗೆ ಮನವಿ ಸಲ್ಲಿಸಲಿದ್ದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಭಾರೀ ಚರ್ಚೆಗಳು ನಡೆದಿದ್ದವು. ಪರ ವಿರೋಧ ವಾದಗಳು ನಡೆದಿದ್ದವು. ಇದೇ ಸಂದರ್ಭದಲ್ಲಿ ಎರಡು ದಿನ ಕಾದು ನೋಡಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದು ಈ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೇಳಿದ್ದರು.

ಈ ಬೆಳವಣಿಗೆಯ ಬೆನ್ನಲ್ಲೇ ಇದೀಗ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್​​ ಅವರು, ರಾಮನಗರ ಜಿಲ್ಲಾ ಕೇಂದ್ರ ಹಾಗೇ ಇರುತ್ತೆ, ಹೆಸರು ಬದಲಾಗುತ್ತೆ. ನಾವು ಬೆಂಗಳೂರು ನಗರ ಜಿಲ್ಲೆಯವರು. ದೊಡ್ಡಬಳ್ಳಾಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ನೆಲಮಂಗಳ ಬೆಂಗಳೂರಲ್ಲಿದ್ದವು. ನಂತರ ಆಡಳಿತ ದೃಷ್ಟಿಯಿಂದ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹೆಸರು ಬದಲಾವಣೆ ವಿಚಾರವಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ ಮುಖಂಡರು ಸಿಎಂಗೆ ಮನವಿ ಕೊಟ್ಟಿದ್ದೇವೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಹೆಸರು. ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ನಮ್ಮ ಪ್ರಯತ್ನ ಆಗ್ತಿದೆ.  ರಾಮನಗರ, ಚನ್ನಪಟ್ಟಣ, ,‌ಕನಕಪುರ, ಮಾಗಡಿ, ಹಾರೋಹಳ್ಳಿ ಸೇರಿ ದಕ್ಷಿಣ ಜಿಲ್ಲೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಹೆಸರಿಡಲು ಮನವಿ ಮಾಡಿದ್ದೇವೆ ಎಂದಿದ್ದಾರೆ. ಈ ವೇಳೆ  ಮಾಜಿ ಸಂಸದ ಡಿ.ಕೆ.ಸುರೇಶ್​, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ  ರಾಮನಗರ ಶಾಸಕ ಇಕ್ಬಾಲ್​​ ಹುಸೇನ್​​ ಸೇರಿದಂತೆ ಹಲವರು ಭಾಗಿಯಾಗಿದ್ದಾರು.

ಇದನ್ನೂ ಓದಿ : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಬರ್ತಡೇಗೆ ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here