ಬೆಂಗಳೂರಲ್ಲಿ ಭಾರೀ ಮಳೆಗೆ ಧರೆಗುರುಳಿದ ಬೃಹತ್ ಮರ – 2 ಕಾರು, 3 ಬೈಕ್​​ ಜಖಂ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಬೃಹತ್ ಮರವೊಂದು ಧರೆಗುರುಳಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನವರಂಗ್ ಸರ್ಕಲ್ ಬಳಿ ಮರ ಬುಡ ಸಮೇತ ಉರುಳಿ ಬಿದ್ದ ಪರಿಣಾಮ ಎರಡು ಕಾರು, ಮೂರು ಬೈಕ್​​ಗಳು ಜಖಂ ಆಗಿದ್ದು, ಈ ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿರೋ ಸಾಧ್ಯತೆಯಿದೆ.

ಬೃಹತ್ ಮರ ರಸ್ತೆಯ 2 ಬದಿಗಳವರೆಗೂ ಚಾಚಿ ಬಿದ್ದುಕೊಂಡಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ GBA ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೃಹತ್ ಮರಬಿದ್ದ ಪರಿಣಾಮ ಸಂಚಾರ ಮಾರ್ಗ ಬದಲಾಯಿಸಿದ್ದು, ತುಮಕೂರು ರಸ್ತೆಯಿಂದ ಬರುವ ವಾಹನಗಳ ಮಾರ್ಗ ಚೇಂಜ್ ಮಾಡಲಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವು!

Btv Kannada
Author: Btv Kannada

Read More