ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ SC, ST ಸಮುದಾಯದ ವಿದ್ಯಾರ್ಥಿಗಳಿಗೆ ಸಾವಿರಾರು ಕೋಟಿ ಅನುದಾನದಲ್ಲಿ ಹಲವು ಯೋಜನೆಗಳನ್ನು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಾರಿಗೊಳಿಸಿದೆ. ಅದರಲ್ಲಿ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಸೌಲಭ್ಯವನ್ನು ಉನ್ನತ ಮಟ್ಟದಲ್ಲಿ ಕೊಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

SC ಸಮುದಾಯದ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸ್ಟೆಲ್ ಸವಲತ್ತುಗಳು ಕೆಲವು ಇನ್ನಿತರ ಸಮುದಾಯದ ವಿದ್ಯಾರ್ಥಿಗಳ ಪಾಲಾಗಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ತನಿಖೆಗೆ ಸೂಚಿಸಿದ್ದರು. ಸಚಿವರ ಸೂಚನೆ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ನವರ ನೇತೃತ್ವದಲ್ಲಿ ಬೃಹತ್ ದಾಳಿ ನಡೆಸಲಾಗಿದೆ.

ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ನಡೆಸುವ ಹಲವು ಹಾಸ್ಟೆಲ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರೇಡ್ ವೇಳೆ ಹಲವು ಅಕ್ರಮಗಳು ಪತ್ತೆಯಾಗಿದ್ದು, ರೇಡ್ ನಡೆಯುತ್ತಿದ್ದಂತೆ ಹಲವು ನಕಲಿ ವಿದ್ಯಾರ್ಥಿಗಳು ಚಡ್ಡಿಯಲ್ಲೇ ಓಡಿದ್ದಾರೆ. ಇದೀಗ ಈ ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.



ಇದನ್ನೂ ಓದಿ : ಡಾರ್ಜಿಲಿಂಗ್‌ನಲ್ಲಿ ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ!







