ಕೋಲಾರ : ಟೆಂಪೋ ಟ್ರಾವೆಲರ್ಗೆ ಈಚರ್ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 16 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ನಡೆದಿದೆ.

ಖಾಸಗಿ ಕಂಪನಿ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ ಬಾಣಸಿಗರನ್ನು ಕರೆಸಲಾಗಿತ್ತು. ಸಂಜೆ ಕೆಲಸ ಮುಗಿಸಿ ಟೆಂಪೋ ಟ್ರಾವೆಲರ್ನಲ್ಲಿ ವಾಪಸ್ ಹೋಗ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಕಲ್ಕೆರೆ ಸಮೀಪ ತಿರುವಿನಲ್ಲಿ ಟೆಂಪೋ ಟ್ರಾವೆಲರ್ಗೆ ಈಚರ್ ಲಾರಿ ಡಿಕ್ಕಿಯಾಗಿ ಮೂವರು ಬಾಣಸಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 16 ಮಂದಿ ಗಾಯಾಳುಗಳನ್ನು ಕೆಜಿಎಫ್ ಮತ್ತು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಗಾರಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಹೋಟೆಲ್ ಬಿಲ್ಡಿಂಗ್ ರೆಂಟ್, ಕಮರ್ಷಿಯಲ್ ಗ್ಯಾಸ್ GST ಇಳಿಸಿ – ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮನವಿ!
Author: Btv Kannada
Post Views: 350







