ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್ ಸೇರಿದಂತೆ ಹಲವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.
ED ಅಧಿಕಾರಿಗಳು ದಾಳಿ ಮಾಡಿರುವ ಬೆನ್ನಲ್ಲೇ ಹೆಚ್ಚಿನ ವಿಚಾರಣೆಗೆ ಮಾಜಿ ಸಚಿವ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ಇನೋವಾ ಕಾರಿನಲ್ಲಿ ಕರೆದೊಯ್ದ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್ನ್ನೂ ಅರೆಸ್ಟ್ ಮಾಡಿದ್ದಾರೆ. ಹರೀಶ್ ನಾಗೇಂದ್ರ ಆಪ್ತ ಸಹಾಯಕನಾಗಿದ್ದು, ED ಕಚೇರಿಗೆ ಹರೀಶ್ನನ್ನು ಅಧಿಕಾರಿಗಳು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಹಣ ಸಾಗಾಟ ಮಾಡಿರೋದ್ರಲ್ಲಿ ಹರೀಶ್ ಪಾತ್ರ ಇರುವ ಮಾಹಿತಿ ಲಭ್ಯವಾಗಿದ್ದು, ಎಲ್ಲಿಂದ ಎಲ್ಲಿಗೆ..? ಯಾರಿಂದ-ಯಾರಿಗೆ ಹಣ ಬದಲಾಗಿತ್ತು..? ಎಷ್ಟು ಹಣ ಸಾಗಣೆ ಮಾಡಲಾಗಿತ್ತು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಾಜಿ ಮಂತ್ರಿ ನಾಗೇಂದ್ರ ಅರೆಸ್ಟ್ ? ತೀವ್ರ ವಿಚಾರಣೆ ಬಳಿಕ ಕರೆದೊಯ್ದ ED ಅಧಿಕಾರಿಗಳು..!