ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರವಾಗಿ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾವೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ಸಂಸತ್ನಲ್ಲಿ ನಿಂತಿದ್ರು, ಶಿವ ಮೂರನೇ ಕಣ್ಣು ಬಿಟ್ರೆ ಏನಾಗುತ್ತೆ ಅನ್ನೋದು ರಾಹುಲ್ಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.
ಈ ವಿಚಾರವಾಗಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ದೂರು ನೀಡಿದ್ದರು. ದೂರಿನ ಮೇರೆಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಬಿಎನ್ಎಸ್ 353 ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
ಇದನ್ನೂ ಓದಿ : ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್ ಅರೆಸ್ಟ್..!
Post Views: 20