ಬೆಂಗಳೂರು : ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆತ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಕೀಲನ ವರ್ತನೆಗೆ ಹಿರಿಯ ವಕೀಲ ಎಸ್.ಬಾಲನ್ ಅವರು ಆಕ್ರೋಶ ಹೊರಹಾಕಿದ್ದರು.

ನಿನ್ನೆ ಹಿರಿಯ ವಕೀಲ ಎಸ್.ಬಾಲನ್ ಅವರ ನೇತೃತ್ವದಲ್ಲಿ ವಿಧಾನಸೌಧ ಪೊಲೀಸ್ ಠಾಣೆ ಮುಂಭಾಗ ಕರ್ನಾಟಕ ರಾಜ್ಯ ವಕೀಲರ SC-ST ಸಂಘ ಪ್ರತಿಭಟನೆ ನಡೆಸಿತ್ತು. ಈ ಬೆನ್ನಲ್ಲೇ ವಕೀಲ ಎಸ್.ಬಾಲನ್ ನೇತೃತ್ವದ ಹೋರಾಟಕ್ಕೆ ಜಯ ಸಿಕ್ಕಿದೆ.

ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಈ ಮೂಲಕ ವಕೀಲ ಎಸ್.ಬಾಲನ್ ಅವರ ನೇತೃತ್ವದ ಹೋರಾಟಕ್ಕೆ ಗೆಲುವು ಸಿಕ್ಕಿದೆ.


Author: Btv Kannada
Post Views: 219







