ಬೆಂಗಳೂರು : ನಟಿ ರಮ್ಯಾಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು ಕೋರ್ಟ್ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ 11 ಮಂದಿ ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿತ್ತು. ಈ ಆರೋಪಿಗಳ ತನಿಖೆ ಪೂರ್ಣಗೊಳಿಸಿ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಆರೋಪಿಗಳ ಮೊಬೈಲ್, ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್ಸ್, ದೂರುದಾರೆ ರಮ್ಯಾ ಸ್ಟೇಟ್ ಮೆಂಟ್, FSL ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಅಶ್ಲೀಲ ಕಮೆಂಟ್ ಹಾಕಿದ 6 ಆರೋಪಿಗಳು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಈ 6 ಆರೋಪಿಗಳು ಸಿಕ್ಕ ಬಳಿಕ ಸಿಸಿಬಿ ಸೈಬರ್ ಪೊಲೀಸರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.
ಇನ್ನು ಅಶ್ಲೀಲ ಕಮೆಂಟ್ ಹಾಕಿದ ನಾಲ್ವರು ಆರೋಪಿಗಳಿಗೆ ಬಿಡುಗಡೆ ಭಾಗ್ಯವೇ ಇಲ್ಲ. ಚಾರ್ಜ್ ಶೀಟ್ ಬೆನ್ನಲ್ಲೇ ಶೀಘ್ರದಲ್ಲೇ ಟ್ರಯಲ್ ಆರಂಭಕ್ಕೆ ಸಿದ್ಧತೆ ನಡೆಯಲಿದ್ದು, ದರ್ಶನ್ ಮೇಲಿನ ಅಂಧಾಭಿಮಾನಕ್ಕೆ ಫ್ಯಾನ್ಸ್ ಜೈಲು ಶಿಕ್ಷೆ ಅನುಭವಿಸ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಪೋಸ್ಟ್‌ಗಳಿಂದ ಕೆರಳಿದ ದರ್ಶನ್ ಅವರ ಕೆಲ ಅಭಿಮಾನಿಗಳು, ರಮ್ಯಾ ಅವರನ್ನು ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ರಮ್ಯಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಸೈಬರ್ ಕ್ರೈಂ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ 11 ಮಂದಿ ದರ್ಶನ್ ಅಭಿಮಾನಿಗಳನ್ನು ಬಂಧಿಸಿದ್ದರು.
ಇದನ್ನೂ ಓದಿ : ಇಂದಿನಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭ – ಮಧ್ಯಾಹ್ನ 12 ಗಂಟೆಗೆ ದೇವಿಯ ಗರ್ಭಗುಡಿ ಬಾಗಿಲು ಓಪನ್!







