Download Our App

Follow us

Home » ರಾಜಕೀಯ » ಮುಡಾ ಹಗರಣ ಸಿಬಿಐಗೆ ವಹಿಸಲು ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದ ಶಾಸಕ ಯತ್ನಾಳ್​..!

ಮುಡಾ ಹಗರಣ ಸಿಬಿಐಗೆ ವಹಿಸಲು ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದ ಶಾಸಕ ಯತ್ನಾಳ್​..!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ನ್ಯಾಯಾಲಯವು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ‌ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಶಾಸಕ ಯತ್ನಾಳ್ ಅವರು ಟ್ವೀಟ್ ಮಾಡಿದ್ದು, “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣವು ಸುಮಾರು ₹ 4,000 ಕೋಟಿ ಒಳಗೊಂಡಿರುವ ಗಂಭೀರ ಹಗರಣವಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರು ಭಾಗಿಯಾಗಿದ್ದಾರೆ.

ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಹಿಂಪಡೆಯಲು ಕರ್ನಾಟಕ ಕ್ಯಾಬಿನೆಟ್‌ನ ಸಚಿವರೊಬ್ಬರು ಮೈಸೂರಿಗೆ ಪ್ರಯಾಣಿಸಿದ್ದಾರೆ ಎಂದು ಇತ್ತೀಚಿನ ಮಾಧ್ಯಮ ವರದಿಗಳು ಬಹಿರಂಗಪಡಿಸಿವೆ.

ಮುಡಾ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಪ್ರಾರಂಭಿಸಲು ನಾನು ಕರ್ನಾಟಕದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಹೆಚ್ಚುವರಿಯಾಗಿ, ಕರ್ನಾಟಕ ಹೈಕೋರ್ಟ್ ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮೇಲ್ವಿಚಾರಣೆ ಮಾಡಬೇಕೆಂದು ನಾನು ಒತ್ತಾಯಿಸಿದೆ. ಎಂದು ಟ್ವೀಟ್ ಮೂಲಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಕನ್ನಡ ಕಲಾ ಲೋಕದ ಅಪರೂಪದ ಪ್ರತಿಭೆ – ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ನಿರೂಪಕಿ ಅಪರ್ಣಾ ಇನ್ನು ನೆನಪು ಮಾತ್ರ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here