ಮತ್ತೆ ಒಂದಾದ ‘ಬೆಲ್ ಬಾಟಂ’ ಜೋಡಿ – ‘ಹುಬ್ಬಳ್ಳಿ ಹಂಟರ್ಸ್’ ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್!

ಸ್ಯಾಂಡಲ್‌ವುಡ್‌ನ ‘ಬೆಲ್ ಬಾಟಂ’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ಅವರ ನಿರ್ಮಾಣದ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರಕ್ಕೆ ಈಗ ನಟ ರಿಷಬ್ ಶೆಟ್ಟಿ ಸಾಥ್ ಕೊಟ್ಟಿದ್ದಾರೆ.

ಬೆಲ್ ಬಾಟಂ ಜೋಡಿ ಮತ್ತೆ ಒಟ್ಟಿಗೆ ಫೋಟೋಗೆ ಫೋಸ್ ಕೊಟ್ಟಿದ್ದು, ಈ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ನಿರ್ಮಾಪಕ ಸಂತೋಷ್ ಕುಮಾರ್ ಅವರ ಹೊಸ ಸಿನಿಮಾಗೆ ಡಿವೈನ್ ಸ್ಟಾರ್ ಬೆಂಬಲ ನೀಡಿದ್ದಾರೆ.

ಸಮರ್ಥ್ ಬಿ. ಕಡ್ಕೋಲ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಟೈಟಲ್ ಮೂಲಕವೇ ಭಾರೀ ಸದ್ದು ಮಾಡುತ್ತಿದೆ. ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆಯಾಗಿದೆ.

ನಟ ಪ್ರಮೋದ್ ಶೆಟ್ಟಿ ಈ ಚಿತ್ರದಲ್ಲಿ ಹೀರೋ ಆಗಿದ್ದು, ‘ಮಹಾನಟಿ‌’ ಖ್ಯಾತಿಯ ಧನ್ಯಶ್ರೀ ಸುಜಿತ್ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಸಿನಿಮಾದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

ಇದನ್ನೂ ಓದಿ : ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್!

Btv Kannada
Author: Btv Kannada

Leave a Comment

Read More

Read More