ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಪರಿಶಿಷ್ಟ ವರ್ಗಗಳ ಕಲಾಣ್ಯ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ. ಹಗರಣದಲ್ಲಿ ಶಾಮೀಲಾಗಿರುವುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದ್ದರಿಂದ ನಾಗೇಂದ್ರ ಅವರನ್ನು ಡಾಲರ್ಸ್ ಕಾಲೋನಿಯ ಮನೆಯಿಂದಲೇ ಅರೆಸ್ಟ್ ಮಾಡಿದ್ದಾರೆ.
ಇದೀಗ ನಾಗೇಂದ್ರ ಅರೆಸ್ಟ್ ಬೆನ್ನಲ್ಲೇ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌದ ದದ್ದಲ್ಗೆ ಢವಢವ ಶುರುವಾಗಿದೆ. ಯಾವುದೇ ಕ್ಷಣ ಇಡಿಯಿಂದ ದದ್ದಲ್ ಬಂಧನವಾಗುವ ಸಾಧ್ಯತೆಯಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಎರಡು ದಿನಗಳ ಕಾಲ ಏಕ ಕಾಲಕ್ಕೆ ರಾಯಚೂರು, ಬೆಂಗಳೂರಿನಲ್ಲಿ ದಾಳಿ ಮಾಡಿ ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಕಳೆದ ರಾತ್ರಿ ರೇಡ್ ಅಂತ್ಯಗೊಳಿಸಿ ಹೋಗಿರುವ ಇಡಿ ಟೀಂ ಅಧಿಕಾರಿಗಳು 48 ಗಂಟೆಗಳ ಕಾಲ ದದ್ದಲ್ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ದದ್ದಲ್ ಬಳಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಯಾವುದೇ ಕ್ಷಣ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅರೆಸ್ಟ್ ಮಾಡೋ ಸಾಧ್ಯತೆ
ಇದನ್ನೂ ಓದಿ : ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ..!