‘ನೊಬೆಲ್‌ ಶಾಂತಿ ಪ್ರಶಸ್ತಿ’ಯನ್ನು ಡೊನಾಲ್ಡ್‌ ಟ್ರಂಪ್‌ಗೆ ಅರ್ಪಿಸಿದ ಮಚಾದೊ!

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿರದಿದ್ದರೂ, ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಹಾಗೂ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ ಅವರು ನೊಬೆಲ್‌ ಶಾಂತಿ ಅವಾರ್ಡ್​ನ್ನು ಅಮೆರಿಕ ಅಧ್ಯಕ್ಷರಿಗೆ ಅರ್ಪಿಸಿದ್ದಾರೆ.

ಹೌದು, ಡೊನಾಲ್ಡ್‌ ಟ್ರಂಪ್‌ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಕೈತಪ್ಪಿದ್ದಕ್ಕೆ ಶ್ವೇತಭವನ ಅಸಮಾಧಾನ ವ್ಯಕ್ತಪಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಸ್ವತಃ ಮಾರಿಯಾ ಕೊರಿನಾ ಮಚಾದೊ ಅವರು ತಮಗೆ ದೊರೆತಿರುವ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷರಿಗೆ ಅರ್ಪಿಸೋದಾಗಿ ಹೇಳಿದ್ದಾರೆ.

ವೆನೆಜುವೆಲಾದ ವಿಪಕ್ಷ ನಾಯಕಿ ಮತ್ತು ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ, ತಮಗೆ ದೊರೆತಿರುವ 2025ರ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಜನತೆ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಅರ್ಪಿಸಿದ್ದಾರೆ. “ವೆನೆಜುವೆಲಾದ ನ್ಯಾಯಯುತ ಹೋರಾಟಕ್ಕೆ ಡೊನಾಲ್ಡ್‌ ಟ್ರಂಪ್‌ ಅವರ ಬೆಂಬಲವನ್ನು ಗೌರವಿಸಿ, ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಅವರಿಗೆ ಅರ್ಪಿಸುತ್ತಿದ್ದೇನೆ” ಎಂದು ಮಚಾದೊ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿರುವ ಮಾರಿಯಾ ಕೊರಿನಾ ಮಚಾದೊ, “ವೆನೆಜುವೆಲಾದ ಜನರ ಹೋರಾಟದ ಈ ಗುರುತಿಸುವಿಕೆಯು ನಮ್ಮ ಕಾರ್ಯವನ್ನು ಪೂರ್ಣಗೊಳಿಸಲು ಒಂದು ಉತ್ತೇಜನವಾಗಿದೆ. ಸ್ವಾತಂತ್ರ್ಯವನ್ನು ವಶಪಡಿಸಿಕೊಳ್ಳುವ ನಮ್ಮ ಗುರಿಗೆ ನಾವು ಹತ್ತಿರದಲ್ಲಿದ್ದು, ನಾವು ವಿಜಯದ ಹೊಸ್ತಿಲಲ್ಲಿದ್ದೇವೆ. ಸ್ವಾತಂತ್ರ್ಯವನ್ನು ಗಳಿಸುವ ಮತ್ತು ಪ್ರಜಾಪ್ರಭುತ್ವವನ್ನು ಸ್ಥಾಪಿಸುವ ವೆನೆಜುವೆಲಾ ಜನತೆಯ ಜೊತೆ ನಿಂತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಲ್ಯಾಟಿನ್ ಅಮೆರಿಕದ ಜನರು ಮತ್ತು ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ನಾವು ಈ ಸಮಯದಲ್ಲಿ ಧನ್ಯವಾದ ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

“ನಾನು ಈ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಸಮಸ್ತ ಜನರಿಗೆ ಮತ್ತು ನಮ್ಮ ಉದ್ದೇಶಕ್ಕೆ ಅವರ ನಿರ್ಣಾಯಕ ಬೆಂಬಲ ನೀಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಅರ್ಪಿಸುತ್ತೇನೆ” ಎಂದು ಮಾರಿಯಾ ಕೊರಿನಾ ಮಚಾದೊ ಘೋಷಿಸಿದ್ದಾರೆ.

ಇದನ್ನೂ ಓದಿ : ಪುರಿ ಜಗನ್ನಾಥ್-ವಿಜಯ್ ಸೇತುಪತಿ ಚಿತ್ರಕ್ಕೆ ಅನಿಮಲ್ ಮ್ಯೂಸಿಕ್ ಡೈರೆಕ್ಟರ್ ಹರ್ಷವರ್ಧನ್ ರಾಮೇಶ್ವರ್ ಎಂಟ್ರಿ!

Btv Kannada
Author: Btv Kannada

Read More