ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಂಬಂಧ ಪೋಕ್ಸೋ ಕಾಯಿದೆಯಡಿ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗಲು ಕೋರ್ಟ್ ವಿನಾಯಿತಿ ನೀಡಿದೆ.
ಈ ಪ್ರಕರಣ ಸಂಬಂಧ ಜುಲೈ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಲು ಹಿರಿಯ ವಕೀಲ ಸಿ ವಿ ನಾಗೇಶ್ ಮೂಲಕ ಕೋರ್ಟ್ಗೆ ಮನವಿ ಮಾಡಿದ್ದರು.
ಚಾರ್ಜ್ ಶೀಟ್ ಆಗಿದೆ, ಸಮನ್ಸ್ ಕೂಡ ಜಾರಿಯಾಗಿದೆ ಅಂತಾ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಕೋರ್ಟ್ಗೆ ಮನವಿ ಮಾಡಿದ್ದರು. ಇದೀಗ ವಕೀಲರ ಮನವಿ ಪುರಸ್ಕರಿಸಿದ ಹೈಕೋರ್ಟ್ ಸೋಮವಾರ ಕೋರ್ಟ್ ಹಾಜರಾಗಲು ವಿನಾಯಿತಿ ನೀಡಿ, ವಿಚಾರಣೆ ಜುಲೈ 26 ಕ್ಕೆ ಮುಂದೂಡಿದೆ. ಇಲ್ಲಿ ವಿಚಾರಣೆ ಆದ ಬಳಿಕ ವಿಚಾರಣಾಧೀನ ನ್ಯಾಯಾಲಯ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ತೀರ್ಮಾನ ಮಾಡಿದೆ.
ಇದನ್ನೂ ಓದಿ : ತಮಿಳುನಾಡಿಗೆ ಪ್ರತಿದಿನ 1TMC ನೀರು ಬಿಡಲು ಶಿಫಾರಸ್ಸು – ಸಿಎಂ ನೇತೃತ್ವದಲ್ಲಿ ತುರ್ತು ಸಭೆ ಕರೆದ ಡಿಕೆಶಿ..!