ದಾವಣಗೆರೆ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ – ಹೈಕಮಾಂಡ್ ಅಂಗಳಕ್ಕೆ ತಲುಪಿದ ಆಂತರಿಕ ಸಮೀಕ್ಷೆ ವರದಿ!

ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಹೊಗೆಯಾಡುತ್ತಿದ್ದ ಅಸಮಾಧಾನ ಇದೀಗ ಸ್ಫೋಟಗೊಂಡಿದ್ದು, ಆಂತರಿಕ ಸಮೀಕ್ಷೆಯ ವರದಿ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

AICC ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ದಾವಣಗೆರೆ ಆಂತರಿಕ ಸಮೀಕ್ಷೆಯ ವರದಿಯನ್ನು ಹೈಕಮಾಂಡ್​ಗೆ ನೀಡಿದ್ದಾರೆ. ವರದಿ ಹೈಕಮಾಂಡ್ ಕೈಗೆ ಸೇರುತ್ತಿದ್ದಂತೆ ಖಡಕ್ ಕ್ರಮ ತೆಗೆದುಕೊಳ್ಳಲು ತಯಾರಿ ನಡೆಸುತ್ತಿದ್ದು, ಕೈ ನಾಯಕರಲ್ಲಿ ನಡುಕ ಶುರುವಾಗಿದೆ.

ಹೈಕಮಾಂಡ್ ಮುಂದಿನ ಹೆಜ್ಜೆ ಗಮನಿಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಪಕ್ಷದಿಂದ ಸಸ್ಪೆಂಡ್ ಆಗೋ ಮುನ್ಸೂಚನೆ ಹಿನ್ನೆಲೆ ಅಬ್ದುಲ್ ಜಬ್ಬಾರ್ ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ.

ಇನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಎಂಎಲ್‌ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ದಾವಣಗೆರೆಯ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ : 10 ಕೋಟಿ ವಂಚನೆ – ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ ಕೇಸ್ ದಾಖಲು!

Btv Kannada
Author: Btv Kannada

Leave a Comment

Read More

Read More