ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ವಿ.ಸೋಮಣ್ಣ!

ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.

ರಾಜಕಾರಣದಲ್ಲಿ ಸಕ್ರೀಯರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುವ ಮಣ್ಣಿನ ಮಗ ದೇವೇಗೌಡರು ಶೀಘ್ರವಾಗಿ ಗುಣಮುಖರಾಗಲಿ ಎಂದು ಸಚಿವ ವಿ.ಸೋಮಣ್ಣ ಅವರು ಪ್ರಾರ್ಥಿಸಿದರು.

ದೊಡ್ಡಗೌಡರ ಆರೋಗ್ಯದ ಬಗ್ಗೆ ಅಪ್ಡೇಟ್‌ ಕೊಟ್ಟಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ 3-4 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು 3 ದಿನಗಳ ಹಿಂದೆ ಹೇಳಿದ್ದರು.

ಇದನ್ನೂ ಓದಿ : ತುರ್ತು ಭತ್ಯೆ ಹೆಸರಲ್ಲಿ ಸರ್ಕಾರದ ಬೊಕ್ಕಸಕ್ಕೆ ವಂಚನೆ – ಗುಲ್ಬರ್ಗ ವಿವಿಯ ಮತ್ತೊಂದು ಕರ್ಮಕಾಂಡ ಬಯಲು!

Btv Kannada
Author: Btv Kannada

Read More