ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
“ಕಡಲೂರ ಕಣ್ಮಣಿ” ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು. ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ. ಇದೇ ತಂಡದೊಂದಿಗೆ “ಕಡಲೂರ ಕಣ್ಮಣಿ” ಎರಡನೇ ಭಾಗದಲ್ಲಿ ತರುವ ಸಿದ್ದತೆ ನಡೆಯುತ್ತಿದೆ ಎಂದು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ರಾಮ್ ಪ್ರಸನ್ನ ಹುಣಸೂರು ತಿಳಿಸಿದರು.
“ವರ್ಣಪಟಲ” ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ಅರ್ಜುನ್ ನಗರಕರ್.
ನಾವು ಬ್ಯಾಂಕ್ ಉದ್ಯೋಗಿಗಳು, ಜೊತೆಗೆ ಆಪ್ತಮಿತ್ರರು, ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ಎಲ್ಲರು ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ಮಾಪಕರಾದ ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ತಿಳಿಸಿದರು. ಸಹ ನಿರ್ಮಾಪಕ ಮಹೇಶ್ ಕುಮಾರ್ ಎಂ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಚಿತ್ರದ ಆಕ್ಷನ್ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು. ಚಿತ್ರವನ್ನು 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr ಸುನೀಲ್ ಕುಂಬಾರ್ ತಿಳಿಸಿದರು.
ಇದನ್ನೂ ಓದಿ : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!