ಕಲಬುರಗಿ : ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣ ಸಂಬಂಧ ಜಿಲ್ಲೆಯಲ್ಲಿ ಐದು ಕಡೆ SIT ದಾಳಿ ನಡೆಸಿದೆ. SIT ಟೀಂ ರೇಡ್ ಮಾಡಿ ಹಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಶಾಸಕ ಬಿಆರ್ ಪಾಟೀಲ್ ಆರೋಪಿಸಿದ್ದರು. ಈ ವಿಚಾರ ರಾಹುಲ್ ಗಾಂಧಿ ಪ್ರಸ್ತಾಪಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜ್ಯ ಸರ್ಕಾರ ಈ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸಿತ್ತು.

ಕಳೆದ ಕೆಲ ದಿನಗಳಿಂದ ಎಸ್ಐಟಿ ಕಲ್ಬುರ್ಗಿಯಲ್ಲಿಯೇ ಬೀಡು ಬಿಟ್ಟಿದ್ದು, ಇದೀಗ SIT ಅಧಿಕಾರಿಗಳು ಕಲ್ಬುರ್ಗಿ ನಗರದಲ್ಲಿ ಐದು ಕಡೆ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : Zee ಕನ್ನಡ ಕುಟುಂಬ ಅವಾರ್ಡ್ಸ್- 2025 : ವೀಕೆಂಡ್ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ!
Author: Btv Kannada
Post Views: 203







