ಬೆಂಗಳೂರು : ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದೆ. ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ 26ರವರೆಗೆ ನಡೆಯಲಿದೆ.
ಆದರೆ ಸದನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಯಾರು? ಎಂಬುದು ಎಲ್ಲರ ಪ್ರಶ್ನೆಯಾಗಿತ್ತು. ಇದೀಗ ಈ ಪ್ರಶ್ನೆಗೆ ತೆರೆ ಬಿದ್ದಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸುರೇಶ್ ಬಾಬು ನೇಮಕರಾಗಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಸುರೇಶ್ ಬಾಬು ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಈ ಹಿಂದೆ ಜಿ ಟಿ ದೇವೇಗೌಡ, ಸುರೇಶ್ ಬಾಬು ಎರಡು ಹೆಸರುಗಳು ಚಾಲ್ತಿಯಲ್ಲಿತ್ತು. ಪರಿಷತ್ನಲ್ಲಿ ಜೆಡಿಎಸ್ ಮುನ್ನಡೆಸುವ ಜವಾಬ್ದಾರಿ ಎಸ್ ಎಲ್ ಬೋಜೇಗೌಡ ಹೊರಲಿದ್ದಾರ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಆದರೆ ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ಇದನ್ನೂ ಓದಿ : ಕಸ ಟೆಂಡರ್ನಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆರೋಪ – ಕೇಂದ್ರ ಸಚಿವ HDK ವಿರುದ್ಧ ಡಿಸಿಎಂ ಡಿಕೆಶಿ ಕೆಂಡಾಮಂಡಲ..!
Post Views: 157