ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಕೈಗಾರಿಕಾ ವಿಚಾರಕ್ಕಾಗಿ ಕಳೆದ ಕೆಲವು ದಿನಗಳಿಂದ ತಿಕ್ಕಾಟ ನಡೆಯುತ್ತಿದ್ದು, ಇಂದು ಈ ಜಟಾಪಟಿಗೆ ತೆರೆ ಬೀಳುವ ಸಾಧ್ಯತೆಯಿದೆ.
ರಾಜ್ಯದ ಕೈಗಾರಿಕಾ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇಂದು ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ.
ಈ ವೇಳೆ ರಾಜ್ಯದ ವಿವಿಧೆಡೆ ಕೈಗಾರಿಕೆಗೆ ಭೂಮಿ ಮಂಜೂರು ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
Author: Btv Kannada
Post Views: 232









