ಬೆಂಗಳೂರು : ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್‌ನ್ಯೂಸ್ ನೀಡಿದೆ. ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ. ಇನ್ನು ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.
7ನೇ ವೇತನ ಆಯೋಗ ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.
ಇದನ್ನೂ ಓದಿ : ಇಂದು ದ್ವಿತೀಯ ಪಿಯುಸಿ ಪರೀಕ್ಷೆ-03ರ ಫಲಿತಾಂಶ ಪ್ರಕಟ – ನೋಡೋದು ಹೇಗೆ? ಇಲ್ಲಿದೆ ಮಾಹಿತಿ..!