ಏ.15ಕ್ಕೆ ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆ – ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ!

ಮಂಡ್ಯ : ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೀಗ ಸಮಾರಂಭಕ್ಕೆ ಕ್ಷೇತ್ರದಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿದೆ. ಏಪ್ರಿಲ್ 15 ರಂದು ನಡೆಯಲಿರುವ ಈ ಭವ್ಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಈಗಾಗಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ವಿಶೇಷ ಹೋಮ-ಹವನಗಳು ಹಾಗೂ ವಿವಿಧ ಬಗೆಯ ಪೂಜಾ ಕೈಂಕಾರ್ಯಗಳು ನೆರವೇರುತ್ತಿವೆ. ಇಡೀ ಕ್ಷೇತ್ರವು ಭಕ್ತಾದಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರದಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ.

ಮೋದಿ ಆಗಮನದ ಹಿನ್ನಲೆಯಲ್ಲಿ ಚುಂಚನಗಿರಿಯಲ್ಲಿ ವಿಶೇಷ ಹೆಲಿಪ್ಯಾಡ್ ನಿರ್ಮಾಣ, ಭದ್ರತೆಗೆ ಒತ್ತು ನೀಡಲಾಗಿದೆ. ಇನ್ನು ಭದ್ರತೆಗಾಗಿ 5 SP, 10 ASP, 15 DySP, 40 PI, 151 PSI, 92 ASI, 1700 ಹೆಡ್ ಕಾನ್ಸ್‌ಟೇಬಲ್, 8 KSRP, 10 DAR, 5 QRT ಟೀಂ, 10 ASC ತಂಡವನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ : ಹಾರ್ಮುಜ್‌ ಜಲಸಂಧಿಗೆ ಅಮೆರಿಕ ದಿಗ್ಬಂಧನ ಘೋಷಿಸಿದ ಬೆನ್ನಲ್ಲೇ ತೈಲ ಬೆಲೆ ಏರಿಕೆ!

Btv Kannada
Author: Btv Kannada

Leave a Comment

Read More