ಬಾಗಲಕೋಟೆಯಿಂದ ಹೊರ ನಡೀರಿ – ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿಗೆ DC ಆದೇಶ!

ಬಾಗಲಕೋಟೆ : ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ಅವಹೇಳನ, ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಾಂವಿಧಾನಿಕ ಅಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ಈಗಾಗಲೇ ನಿರ್ಬಂಧ ವಿಧಿಸಲಾಗಿದೆ. ಇದೀಗ ಬಾಗಲಕೋಟೆಯಿಂದ ಹೊರಹೋಗುವಂತೆ DC ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ರಕ್ಷಣೆಗಾಗಿ ಒಂದು ಗಂಟೆಯಲ್ಲಿ ಮಠದಿಂದ ಹೊರಡಬೇಕು ಎಂದು ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಜಿಲ್ಲಾಧಿಕಾರಿ ಆದೇಶ ಜಾರಿಗೊಳಿಸಿದ್ದಾರೆ. ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ನಿನ್ನೆ ಬೀಳಗಿ ತಾಲ್ಲೂಕಿನ ಚಿಕ್ಕಾಲಗುಂಡಿಯಲ್ಲಿ ಇರುವ ಕನೇರಿ ಶಾಖಾ ಮಠದಲ್ಲಿ ಸ್ವಾಮೀಜಿ ಉಳಿದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಸಂಗಪ್ಪ, ಡಿವೈಎಸ್‌ಪಿ ಗಜಾನನ ಸುತಾರ, ಬೀಳಗಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರು ಈ ಕುರಿತು ಸೂಚನೆ ನೀಡಿದರು. ನೋಟಿಸ್‌ ಪಡೆದ ಸ್ವಾಮಿಜಿ, ಯಾವುದೇ ಕಾರಣಕ್ಕೂ ತೆರಳುವುದಿಲ್ಲ. ಬಂಧಿಸುವಂತಿದ್ದರೆ, ಬಂಧಿಸಿ. ಸಮಾಧಾನ ಆಗುವವರೆಗೆ ಜೈಲಿನಲ್ಲಿಡಿ. ಪರಿಣಾಮಕ್ಕೆ ನೀವೇ ಜವಾಬ್ದಾರರು ಎಂದು ಹೇಳಿದರು.

ಇದನ್ನೂ ಓದಿ : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ – ಮಾಜಿ ಸೈನಿಕನಿಗೆ ಗಂಭೀರ ಗಾಯ!

Btv Kannada
Author: Btv Kannada