ಬೆಂಗಳೂರು : ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಸತಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಾಮಗಾರಿಗಳನ್ನು ಅನುಮೋದನೆ ನೀಡಲು, ಕಾಮಗಾರಿಯ ಬಿಲ್ ರಿಲೀಸ್ ಮಾಡಲು, ಕಾಮಗಾರಿಯ ಎಲ್ಲಾ ಮಾಹಿತಿಗಳನ್ನು ನೀಡಲು ಶೇ 40 ರಷ್ಟು ಕಮಿಷನ್ ಪಡೆಯುತ್ತಿದ್ದಾರೆಂದು ರಾಜ್ಯ ಗುತ್ತಿಗೆದಾರರು ಆರೋಪಿದ್ದಾರೆ.

2-3 ದಿನಗಳ ಹಿಂದೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ವಸತಿ ಸಚಿವ ಜಮೀರ್ ಅಹಮದ್ ಖಾನ್, ಸ್ಲಂ ಬೋರ್ಡ್ನ ಟೆಕ್ನಿಕಲ್ ಅಡ್ವೈಸರ್ ಬಾಲರಾಜ್ ಮೇಲೆ ಶೇ 40ರಷ್ಟು ಕಮಿಷನ್ ಆರೋಪ ಮಾಡಿದ್ದರು. ಈ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.

ಇದೀಗ ರಾಜ್ಯ ಗುತ್ತಿಗೆದಾರರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕುಮಾರ ಪಾರ್ಕ್ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಕಾಮಗಾರಿಗಳ ಬಿಲ್ ಮೊತ್ತ ಬಿಡುಗಡೆ ಮಾಡುವುದು ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆಶಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಕೊಬ್ಬಿನ ಮತ್ತು ದುರಹಂಕಾರದ ಜಾಹ್ನವಿ ಅವರನ್ನು ಬಿಗ್ಬಾಸ್ ಇಂದ ಹೊರಹಾಕಿ!







