ಅಕ್ಟೋಬರ್ 31ರವರೆಗೂ ಜಾತಿ ಗಣತಿ ಸಮೀಕ್ಷೆ ವಿಸ್ತರಣೆ – ಸಿಎಂ ಸಿದ್ದು ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು : ರಾಜ್ಯ ಸರ್ಕಾರವು ನಡೆಸುತ್ತಿರುವ ಮಹತ್ವದ ಸಾಮಾಜಿಕ–ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ (ಜಾತಿ ಗಣತಿ) ಅವಧಿಯನ್ನು ವಿಸ್ತರಿಸಲಾಗಿದೆ. ಈ ಸಮೀಕ್ಷಾ ಕಾರ್ಯವನ್ನು ಅಕ್ಟೋಬರ್ 31ರವರೆಗೆ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ, ಶಾಲಾ ಶಿಕ್ಷಣಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ ತಡೆಯಲು ಶಿಕ್ಷಕರನ್ನು ಗಣತಿ ಕಾರ್ಯದಿಂದ ಸಂಪೂರ್ಣವಾಗಿ ಬಿಡುಗಡೆ ಮಾಡುವ ಮಹತ್ವದ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಮತ್ತು ಶಾಲಾ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಶಾಲಾ ಶಿಕ್ಷಣಕ್ಕೆ ಧಕ್ಕೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರವು ಶಿಕ್ಷಕರಿಗೆ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡಿದೆ. ಈ ನಿರ್ಧಾರದಿಂದಾಗಿ ಶಿಕ್ಷಕರು ಸಂಪೂರ್ಣವಾಗಿ ಶಾಲಾ ಚಟುವಟಿಕೆಗಳತ್ತ ಗಮನಹರಿಸಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಉಳಿದ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು, ರಾಜ್ಯ ಸರ್ಕಾರವು ಇತರೆ ಸರ್ಕಾರಿ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಳ್ಳಲು ತೀರ್ಮಾನಿಸಿದೆ. ಸಮೀಕ್ಷಾ ಕಾರ್ಯವು ಸುಗಮವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ಕೆ.ಜೆ. ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ ಅವರು ಭಾಗವಹಿಸಿದ್ದರು. ಇದರ ಜೊತೆಗೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನುಓದಿ : ಅನುಮತಿ ಇಲ್ಲದೇ ಪಥಸಂಚಲನ..ಸೇಡಂನಲ್ಲಿ RSS ಕಾರ್ಯಕರ್ತರ ಬಂಧನ – ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ!

 

Btv Kannada
Author: Btv Kannada

Read More