ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದೆ. ಎರಡನೇ ದಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹರಗಣ ವಿಚಾರವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದ್ದವು. ಮುರನೇ ದಿನವಾದ ಇಂದು ಕೂಡ ಸದನದ ಒಳಗೂ ಹೊರಗೂ ಹಗರಣದ್ದೇ ಕೋಲಾಹಲ ನಡೆದಿದೆ.
ಸದ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳ ವಿರುದ್ಧ ರೊಚ್ಚಿಗೆದ್ದಿರುವ ಬಿಜೆಪಿ ನಾಯಕರು ಬೆಂಗಳೂರಿನ ಪ್ರೀಡಂಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದ್ದು, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಪ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರೊಟೆಸ್ಟ್ ನಡೆದಿದೆ. ಮೆರವಣಿಗೆಗೆ ಸಜ್ಜಾದ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರ ತುಂಬಲು ತಂದಿದ್ದ ಬಸ್ ಅಡ್ಡಗಟ್ಟಿ ಕೂಡ ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕರ್ತರು ಬಸ್ ಮೇಲೆ ಹತ್ತಿ ಆಕ್ರೋಶ ಹೊರ ಹಾಕಿದ್ದಾರೆ.
ಪ್ರೊಟೆಸ್ಟ್ ವೇಳೆ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಸದಾನಂದಗೌಡ, ಮಾಜಿ ಮಂತ್ರಿಗಳಾದ ಕೆ.ಗೋಪಾಲಯ್ಯ ,ಮುನಿರತ್ನ, ಶಾಸಕರಾದ ಎಸ್.ಆರ್ ವಿಶ್ವಾನಾಥ್ ಸೇರಿ ಅನೇಕರು ಭಾಗಿಯಾಗಿದ್ದಾರೆ. ದದ್ದಲ್ ಹಾಗೂ ನಾಗೇಂದ್ರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಫ್ರೀಡಂಪಾರ್ಕ್ನಲ್ಲೇ ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಪರಿಶಿಷ್ಟರಿಗೆ ಮೀಸಲಿಟ್ಟ 25 ಸಾವಿರ ಕೋಟಿ ಗ್ಯಾರಂಟಿಗೆ ಬಳಸಿದ್ದೀರಿ – ಸದನದಲ್ಲಿ ಆರ್.ಅಶೋಕ್ ಕಿಡಿ..!