ದಾವಣೆಗೆರೆ : ವಾಲ್ಮೀಕಿ ನಾಯಕ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜದ ಮುಖಂಡರು ದೂರು ನೀಡಿದ್ದಾರೆ.

ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಗೆ ವಾಲ್ಮೀಕಿ ಸಮಾಜದ ಮುಖಂಡರು ದೂರು ಸಲ್ಲಿಸಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸಂದರ್ಭದಲ್ಲಿ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಕೀಳು ಪದ ಬಳಸಿದ್ದರು.

ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಆರೋಪದಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಡಾವಣೆ ಠಾಣೆಯಲ್ಲಿ ದೂರು ನೀಡಿದ ಬಳಿಕ ವಾಲ್ಮೀಕಿ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಸಮುದಾಯದ ವಿರುದ್ಧ ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಮಾಜಿ ಸಂಸದ ರಮೇಶ ಕತ್ತಿ ಬಂಧಿಸುವಂತೆ ಪ್ರತಿಭಟನಾಕಾರರ ಆಗ್ರಹಿಸಿದ್ದಾರೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸಂದರ್ಭದಲ್ಲಿ ಕತ್ತಿಯವರು ನೀಡಿದ ಹೇಳಿಕೆಯು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವಾಲ್ಮೀಕಿ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನು ಓದಿ : ಓಲಾ ಕಂಪನಿಯ ಸಿಬ್ಬಂದಿ ಅನುಮಾನಸ್ಪದ ಸಾವು – ಓಲಾ ಎಲೆಕ್ಟ್ರಿಕ್ ಕಂಪನಿ ಹೆಡ್ ಮೇಲೆ FIR!







